ಆರು ಬಲ್ಲರು ಹರಿಹರಾದಿಗಳ ಮಹಿಮೆಯನು ಪ
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ ಅ
ಪೌರತ್ರಯವ ಗೆಲ್ವ ಸಮಯದಲ್ಲಿ ತಪ ಮಾಡಿ
ನಾರಾಯಣಾಸ್ತ್ರವನು ಪಡೆದನೀತ
ಗೌರೀ ಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ
ಬಲಿಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-
ಗಿಲ ಕಾಯ್ದನಚ್ಯುತನು ಅನುಗಾಲದಿ
ಬಲು ಭುಜನು ಬಾಣಾಸುರನ ಗೃಹ ದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು
ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃಷ್ಟಿಸ್ಥಿತಿಲಯ
ಕ್ಕಾಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿಕೇಶವನ ಮಹಿಮೆಯನು
Music Courtesy:
Video
Transliteration
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ