ಕೀರ್ತನೆ - 8     
 
ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ ಗೋಪಿದೇವಿಯ ತನಯ ಗೋಪಾಲ ಬಾಲಗಲ್ಲದೆ ಪ ದೊರೆಯ ತನದಲಿ ನೋಡೆ ಧರಣಿ ಜಾತೆಯ ರಮಣ ಸಿರಿಯ ತನದಲಿ ನೋಡೆ ಶ್ರೀಕಾಂತನು ಹಿರಿಯ ತನದಲಿ ನೋಡೆ ಸರಸಿಜೋದ್ಭವನ ಪಿತನು ಗುರುವು ತನದಲಿ ನೋಡೆ ಆದಿಗುರುವು ಪಾವನತ್ವದಿ ನೋಡೆ ದೇವಿ ಗಂಗಾಜನಕ ದೇವತ್ವದಲಿ ನೋಡೆ ದಿವಿಜರೊಡೆಯ ಲಾವಣ್ಯದಲಿ ನೋಡೆ ಲೋಕ ಮೋಹನ ಪಿತನು ಜವ ಧೈಯ್ಯದಲಿ ನೋಡೆ ಅಸುರಾಂತಕ ಗಗನದಲಿ ಸಂಚರಿಪ ವೈನತೇಯ ವಾಹನ ಜಗವನು ಪೊತ್ತಿರ್ಪ ಶೇಷ ಶಯನ ಕಾಗಿನೆಲೆಯಾದಿಕೇಶವರಾಯಗಲ್ಲದೆ ಮಿಗಿಲು ದೈವಗಳಿಗೀ ಭಾಗ್ಯಮುಂಟೆ