ಕೀರ್ತನೆ - 10     
 
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು ಬರೆದೋದಲವನ ಪಿತ ಕೋಪದಿಂದ ಸ್ಥಿರವಾದಡೀ ಕಂಬದಲಿ ತೋರು ತೋರೆಸಲು ಭರದಿಂದ ಬರಲದಕೆ ವೈಕುಂಠ ನೆರೆಮನೆಯೇ ಪಾಪ ಕರ್ಮವ ಮಾಡಿದಜಮಿಳನ ಯಮಭಟರು ಕೋಪದಿಂದೆಳೆಯುತಿರೆ ಭೀತಿಯಿಂದ ತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತ ದ್ವೀಪವೀ ಧರೆಗೆ ಸನಿಹದಲ್ಲಿಹುದೆ ಕರಿರಾಜನನು ನೆಗಳು ನುಂಗುತಿರೆ ಭಯದಿಂದ ಮೊರೆಯಿಡಲು ಕೇಳಿ ತ್ವರಿತದಲಿ ಬಂದು ಕರುಣದಲಿ ಬಂಧನವ ಪರಿಹರಿಸೆ ಗಜರಾಜ ನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ ಕುರುಪತಿಯು ಬ್ರೌಪದಿಯ ಸೀರೆಯನು ಸೆಳೆಯುತಿರೆ ತರುಣಿ ಹಾ ಕೃಷ್ಣ ಎಂದೊದರೆ ಕೇಳ್ದು ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ ಪುರಿಗೆ ದ್ವಾರಾವತಿಯು ಕೂಗಳತೆಯೆ ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ ಗಣನೆಯಿಲ್ಲದ ಮಹಾಮಹಿಮನೆನಿಪ ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು ನೆನೆದವರ ಮನದೊಳಿಹನೆಂಬ ಬಿರುದುಂಟಾಗಿ