ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ದಿ ಎನ್ನೊಳಗಿಲ್ಲ - ಗುಣ ಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ
ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲ
ನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲ
ಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲ
ಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ
ಸನಕಾದಿ ಮುನಿಯಂತೆ ವನದೊಳು ಅನುದಿನ ಚರಿಸಲಿಲ್ಲ.
ಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲ
ಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ
ಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ
ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲ
ವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲ
ಮದಗಜದಂತೆ ಮಕರಿಗೆ ಸಿಕ್ಕಿ ಒರಲಲಿಲ್ಲ
ಗದರಿ ಶಿಶುಪಾಲನಂದದಿ ನಿನ್ನನುಪೇಕ್ಷಿಸಿ ಜರೆಯಲಿಲ್ಲ
ಬುವಿಯೊಳು ಬಲಿಯಂತೆ ದಾನವ ನೀಡಲಿಲ್ಲ
ಭವನಂತೆ ಸ್ಮಶಾನದಿ ಮನೆಮಾಡಿ ಸ್ಮರಿಸಲಿಲ್ಲ.
ತವ ಪುಂಡರೀಕನಂತೆ ಹಲಗೆಯಿಟ್ಟಿಗೆ ಮೇಲೆ ನಿಲಿಸಲಿಲ್ಲ ಭುವನದೊಡೆಯ ನೆಲೆಯಾದಿಕೇಶವನ ಮರೆಯಲಿಲ್ಲ.
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ