ನಾರಾಯಣೆನು ಮನವೆ ನರಹರಿಯ ನೆನೆ ಮನವೆ
ಘೋರ ದುರಿತಗಳ ಬೆದರಿಸಿ ಓಡಿಸುವುದು
ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತು
ಮರೆಯದಲೆ ಅಲ್ಲಿ ಅಧಿಕಾರಿಯಾಗೊ ತಿ
ರುಮಂತ್ರವನು ಜಪಿಸು ತಿರುಲಾಂಛನವ ಧರಿಸು
ಪರಮ ವೈಷ್ಣವರ ಪಂಕ್ತಿಯ ಸೇರು ಮನವೆ
ಕುಲಛಲಂಗಳ ಬಿಟ್ಟು ಬಲು ಪಾಶಗಳ ತರಿದು
ಹಲವು ಕೊಂಬೆಗೆ ನೀನು ಹರಿದಾಡದೆ
ಸುಲಭದಲಿ ಶ್ರೀಪಾದತೀರ್ಥ ಪ್ರಸಾದವನು
ನೆಲೆಗೊಳಿಸಿ ಆತ್ಮನಿಗೆ ನಿತ್ಯ ಸುಖಿಯಾಗೋ
ಶೇಷವಿಶೇಷವೆಂದೆನಿಪ ಪರಮಾರ್ಥದೊಳು
ಮೀಸಲಳಿಯದ ಪಾಪರಹಿತನಾಗು
ವಾಸಾಧಿಪತಿ ಕಾಗಿನೆಲೆಯಾದಿಕೇಶವನ
ದಾಸಾನುದಾಸರಿಗೆ ದಾಸ ನೀನಾಗೊ
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ