ನಂಬು ನಾರಾಯಣನ ನಂಬೋ ನರಹರಿಯ
ನಂಬಿದಾ ಭಕ್ತರ ಕುಟುಂಬ ಸಾರಥಿಯ
ಬಲಿ ನಂಬಿ ಪಾತಾಳಲೋಕಕರಸಾದನದೆ
ಕುಲದ ಪ್ರಹ್ಲಾದನು ನಿಜವ ಕಂಡ
ಕಲಿ ವಿಭೀಷಣ ನಂಬಿ ಲಂಕೆಯಲಿ ಸ್ಥಿರವಾದ
ಛಲದ ಪಾರ್ಥನು ನಂಬಿ ವಿಶ್ವರೂಪವ ಕಂಡ
ಆಂಬರೀಷನು ನಂಬಿ ವೈಕುಂಠವೇರಿದನು
ಹಂಬಲಿಸಿ ಶಶಿಧರನು ಉರಿಯ ಗೆದ್ದ
ಕುಂಭಿನೀದೇವಿ ತಾ ಬಂಧನವ ಕಳೆದಳು
ಅಂಬುಜಾಕ್ಷಿ ದ್ರೌಪದಿಯು ಮಾನ ಉಳುಹಿಕೊಂಡಳು
ಅತಿ ಭಕುತರಿಗೆ ಮೆಚ್ಚಿ ಗತಿಮೋಕ್ಷವನಿತ್ತನು
ಮತಿಭ್ರಷ್ಟ ಅಜಮಿಳನ ಉದ್ಧರಿಸಿದನು
ಕ್ಷಿತಿಯೊಳಗೆ ಕಾಗಿನೆಲೆಯಾದಿಕೇಶವರಾಯ
ಪತಿತ ಪಾವನ ಪರಮಪುರುಷೋತ್ತಮನನು
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ