ಬಲ್ಲವರೆ ಬಲ್ಲರು ಎಲ್ಲವರು ಅರಿಯರು
ಪುಲ್ಲಲೋಚನ ಪರಬ್ರಹ್ಮನೆಂಬುದನು
ಅಜಜ್ಞಾನಾಧಿಕ ಬಲ್ಲ ಅನಲಸ್ನೇಹಿತ ಬಲ್ಲ
ಗಜ ಚರ್ಮಾಂಬರ ಬಲ್ಲ ಗರುಡ ಬಲ್ಲ
ಭುಜಗೇಶ್ವರ ಬಲ್ಲ ಭೂರಿಲೋಚನ ಬಲ್ಲ
ತ್ರಿಜಗದಧಿಪತಿ ತ್ರಿವಿಕ್ರಮನೆಂಬುದನು
ಶುಕಯೋಗೀಶ್ವರ ಬಲ್ಲ ಸುಗುಣ ನಾರದ ಬಲ್ಲ
ಭಕುತ ಪ್ರಹ್ಲಾದ ಬಲ್ಲ ಬಲಿಯು ಬಲ್ಲ
ರುಕುಮಾಂಗದ ಬಲ್ಲ ಋಷಿ ಪರಾಶರ ಬಲ್ಲ
ಮಕರಕುಂಡಲಧರ ಪರಾತ್ಪರನೆಂಬುದನು
ಅಂಬರೀಶನು ಬಲ್ಲ ಅತ್ರಿ ಋಷಿಯು ಬಲ್ಲ
ಸಂಭ್ರಮದಿ ಮನು ಬಲ್ಲ ಸಹದೇವ ಬಲ್ಲ
ಬೆಂಬಿಡದುದ್ಧವ ಬಲ್ಲ ಬೇಡಿದ ಧ್ರುವ ಬಲ್ಲ
ಕಂಬು ಚಕ್ರಧರ ಕರ್ಮಹರನೆಂಬುದನು
ವಶಿಷ್ಠಮುನಿ ಬಲ್ಲ ವರ ವಿಭೀಷಣ ಬಲ್ಲ.
ವಿಶಿಖಶಯನ ಬಲ್ಲ ವಿದುರ ಬಲ್ಲ
ಋಷಿ ವಾಲ್ಮೀಕಿ ಬಲ್ಲ ರಾಜ ವಿದೇಹ ಬಲ್ಲ
ಶಶಿಮಿತ್ರನೇತ್ರ ಸರ್ವೋತ್ತಮನೆಂಬುದನು
ವಾಗಿನಿಂದಕ್ರೂರ ಬಲ್ಲ ವಚನಿ ಶೌನಕ ಬಲ್ಲ
ಯೋಗಿ ಕಪಿಲ ಬಲ್ಲ ಭೈಗು ಬಲ್ಲನು
ತ್ಯಾಗಿ ಧರ್ಮಜ ಬಲ್ಲ ರಣದೊಳರ್ಜುನ ಬಲ್ಲ
ಕಾಗಿನೆಲೆಯಾದಿಕೇಶವ ಕೈವಲ್ಯನೆಂಬುದನು
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ