ಮರೆಯದಿರು ಮರೆಯದಿರು ಮನುಜಾ
ನಾರಾಯಣನ ಸ್ಮರಣೆಯನು ಮಾಡು ಮನುಜಾ
ರಂಗನಾಥನು ಇರಲಿಕ್ಕೆ ಜಂಗುಳಿ ದೈವಗಳೇಕೆ
ತುಂಗಭದ್ರೆ ಇರಲಿಕ್ಕೆ ಕೆರೆಬಾವಿಯೇಕೆ
ಅಂಗನೆ ಸತಿ ಇರಲಿಕ್ಕೆ ಬಣಗು ಹೆಣ್ಣುಗಳೇಕೆ
ಮಂಗಳಾತ್ಮಕನಿರಲಿಕ್ಕೆ ಪರದೈವವೇಕೆ
ಹಾಲು ಹಳ್ಳವಿರಲಿಕ್ಕೆ ವಾಳಿಯವ ತರಲೇಕೆ
ಮೇಲು ನಾಮವಿರಲಿಕ್ಕೆ ಕಟುಕು ಇನ್ನೇಕೆ
ಬಾಲ ಹನುಮನಿರಲಿಕ್ಕೆ ಹುಲು ಕಪಿಗಳೇಕೆ
ಒಳ್ಳೆ ತುಳಸಿ ಇರಲಿಕ್ಕೆ ಕಗ್ಗೊರಲೆಯೇಕೆ
ಚಿನ್ನದ ಗಿರಿಯಿರಲಿಕ್ಕೆ ಕಬ್ಬಿಣದ ಮೊರಡಿಯೇಕೆ
ರನ್ನ ಮಾಣಿಕವಿರಲಿಕ್ಕೆ ಕಾಜಿನ ಹರಳೇಕೆ
ಅನ್ನ ತುಪ್ಪವಿರಲಿಕ್ಕೆ ಮದ್ಯಪಾನಗಳೇಕೆ
ಚೆನ್ನಾಧಿಕೇಶವನಿರೆ ಬಿನುಗು ದೈವಗಳೇಕೆ
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ