ಮುತ್ತು ಬಂದಿದೆ ಕೇರಿಗೆ - ಜನರು ಕೇಳಿ
ಭಕ್ತಿಯುಳ್ಳವರೆಲ್ಲ ಕಟ್ಟಿಕೊಳ್ಳಿ ಸೆರಗಿನಲ್ಲಿ
ಥಳಥಳಿಸುವ ಮುತ್ತು ಕಮಲ ನೇತ್ರದ ಮುತ್ತು
ಕಲುಷ ಪರ್ವತಕ್ಕಿದು ಕುಲಿಶವಾಗಿಹ ಮುತ್ತು
ಹಲಧರಾನುಜನೆಂಬ ಪವಿತ್ರ ನಾಮದ ಮುತ್ತು
ಒಲಿದು ಭಜಿಪರ ಭವವ ತರಿದು ಕಾಯುವ ಮುತ್ತು
ಅಂಜದಿದ್ದವರಿಗೆ ಅಂಜಿಕೆ ತೋರುವ ಮುತ್ತು
ಭಂಜಿಸಿದವರಿಗೆ ಭಯವ ತೋರುವ ಮುತ್ತು
ಸಂಜೀವರಾಯರ ಹೃದಯದೊಳಗಿಹ ಮುತ್ತು
ಕಂಜಭವಾದಿಗಳೆ ಶಿರಸಾವಹಿಸುವ ಮುತ್ತು
ಜ್ಞಾನವೆಂಬ ದಾರದಲ್ಲಿ ಪೋಣಿಸಿ ನೋಡುವ ಮುತ್ತು
ಜ್ಞಾನಿಗಳ ಮನದಲ್ಲಿ ಮೆರೆವ ಮುತ್ತು
ಆನಂದತೀರ್ಥರ ಮನದಲೊಪ್ಪುವ ಮುತ್ತು
ಶ್ರೀನಿಧಿ ಆದಿಕೇಶವನೆಂಬ ಆಣಿಮುತ್ತು
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ