ಸಂಸಾರ ಸಾಗರವನುತ್ತರಿಸುವಡೆ
ಕಂಸಾರಿ ನಾಮವೊಂದೇ ಸಾಕು ಮರುಳೆ
ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದು
ಸತತ ವ್ರತವ ಮಾಡುವೆನೆಂಬ ಹಮ್ಮು ಬೇಡ
ಶ್ರುತಿಸ್ಮೃತಿಯರಿತು ನಡೆವೆನೆಂಬ ಚೇಷ್ಟೆಯು ಬೇಡ
ರತಿಪತಿಪಿತನ ನಾಮವೊಂದೆ ಸಾಕು ಮರುಳೆ
ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆ
ವನಿತೆಯನು ಬಿಟ್ಟು ತಪವಿರಲು ಬೇಡ
ಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡ
ವನಜನಾಭನ ನಾಮ ನೆನೆ ಕಂಡ್ಯ ಮರುಳೆ
ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ-
ತಾರ್ಥನಾದೆನೆಂಬುವ ಹೆಮ್ಮೆ ಬೇಡ
ಪಾರ್ಥಸಾರಥಿ ಕಾಗಿನೆಲೆಯಾದಿಕೇಶವನ
ಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ
Music
Courtesy:
ಸ್ಥಲ -
ವಿಷಯ -
ಶ್ರೀಹರಿ ಸ್ತುತಿ ಮತ್ತು ಶ್ರೀಲಕ್ಷ್ಮಿ ಸ್ತುತಿ