ಆರಿಗಾರಿಲ್ಲ ಆಪತ್ಕಾಲದೊಳಗೆ
ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ
ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗ
ದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗ
ಅಸಮಾನನಾದಾಗ ಅತಿ ಭೀತಿಗೊಂಡಾಗ
ಬಿಸಜನಾಭನ ನಾಮ ನೆನೆಕಂಡ್ಯ ಮನವೆ
ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪ
ಘಳುಘುಳಿಸುತ ಕೋಪವನು ತೋರಿದಾಗ
ಮೇಲು ತಾನರಿಯದಯೆ ನಿಂದೆ ಹೊಂದಿರುವಾಗ
ನೀಲಮೇಘಶ್ಯಾಮನ ನೆನೆಕಂಡ್ಯ ಮನವೆ
ಪಂಥದಲಿರುವಾಗ ಪದವಿ ತಪ್ಪಿರುವಾಗ
ದಂತಿಮದವೇರಿ ಬೆನ್ನತ್ತಿದಾಗ
ಕಂತುಪಿತ ಕಾಗಿನೆಲೆಯಾದಿಕೇಶವನ ನಿ-
ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ
Music
Courtesy:
ಸ್ಥಲ -
ವಿಷಯ -
ಆತ್ಮಚರಿತ್ರೆ