ಕನಕದಾಸನ ಮೇಲೆ ದಯ ಮಾಡಲು ವ್ಯಾಸ
ಮುನಿ ಮಠಿಕರೆಲ್ಲರು ದೂರುತಿಹರೊ
ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲು
ದೂರ್ತರಾಗಿದ್ದ ವಿದ್ವಾಂಸರೆಲ್ಲ
ಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲ
ಪೂರ್ತ್ಯಾಗಲೆಂದು ಯತಿ ನಗುತಲಿಹನು
ಮರುದಿನ ಅವರವರ ಪರೀಕ್ಷಿಸಬೇಕೆಂದು
ಕರೆದು ಸನ್ಯಾಸಿಗಳ ಕನಕಸಹಿತ
ತ್ವರಿತದಲಿ ಕರದಲ್ಲಿ ಕದಳಿ ಫಲವನೆ ಕೊಟ್ಟು
ಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು
ಊರ ಹೊರಗೆ ಹೋಗಿ ಬ್ಯಾರೆ ಬ್ಯಾರೆ ಕುಳಿತು
ತ್ವರಿತದಿಂ ಮೆದ್ದು ವಿದ್ವಾಂಸರೆಲ್ಲ
ತೋರಲಿಲ್ಲವು ಎನಗೆ ಏಕಾಂತ ಸ್ಥಳವೆನುತ
ಸಾರಿ ಕದಳಿ ಫಲವ ತಂದು ಮುಂದಿಟ್ಟ
ಡಿಂಬದೊಳು ಶಬ್ದ ವಾಗಾದಿ ಶೋತೃಗಳಲ್ಲಿ
ಇಂಬಾಗಿ ತತ್ತ್ವೆಶರೆಲ್ಲ ತುಂಬಿಹರು
ತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆ
ಕಂಬದಂತಾದರವರೆಲ್ಲ ಕುಳಿತವರು
ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆ
ಕೋಣನಿದಿರಿಗೆ ಕಿನ್ನರಿಯ ಮೀಟಿದಂತೆ
ವೇಣುಧ್ವನಿ ಬಧಿರನ ಬಳಿ ಹೊರಡಿಸಿದಂತೆ ಕಣ್
ಕಾಣದವನಿಗೆ ಕನ್ನಡಿಯ ತೋರಿದಂತೆ
ನೋಡಿದಿರ ಈ ಕನಕನಾಡುವ ಮಾತುಗಳ
ಮೂಢ ಜನರರಿಯಬಲ್ಲರೆ ಮಹಿಮೆಯ
ನಾಡಾಡಿಯಂತೆಯೆ ಮಾಡಿಬಿಟ್ಟರು ಇವಗೆ
ನಾಡೆಲ್ಲ ಹುಡುಕಿದರು ಈಡಾರ ಕಾಣೆ.
ಕರದಲಿ ಮೂರ್ತಿಯ ಪಿಡಿದು ಕೇಳುತ್ತಿರಲು
ಅರಿಯದಜ್ಞಾನದಲಿ ಪೇಳುತ್ತಿರಲು
ತ್ವರದಿ ಕನಕನು ಬಂದು ವಾಸುದೇವನ ರೂಪ
ಪರಬೊಮ್ಮ ಪುರಂದರ ವಿಠಲನೆಂದ
Music
Courtesy:
ಸ್ಥಲ -
ವಿಷಯ -
ಆತ್ಮಚರಿತ್ರೆ