ಕೀರ್ತನೆ - 59     
 
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿ ಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿ ಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿ ಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ