ನಾವು ಕುರುಬರು, ನಮ್ಮ ದೇವರು ಬೀರಯ್ಯ
ಕಾವ ನಮ್ಮಜ್ಜ ನರಕುರಿಯ ಹಿಂಡುಗಳ
ಅಷ್ಟಮದ ಮತ್ತರಗಳೆಂತೆಂಬ ಟಗರುಗಳು
ದೃಷ್ಟಿ ಜೀವಾತ್ಮನೆಂತೆಂಬ ಆಡು
ಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳು
ಕಟ್ಟಿ ಕೋಲಿನಲ್ಲಿ ಇರಿಯುತಿಹ ನಮ್ಮಜ್ಜ
ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳು
ಕಾದಿದ್ದು ನಮ್ಮಜ್ಜನ ಹಿಂಡೊಳಗೆ
ಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲು
ಆದರಿಸಿ ಆಂಬಲಿಯನರವ ನಮ್ಮಜ್ಜ
ಆರಿವೆಂಬ ಮರಿಗಳು ಹಿಂಡಿನೊಳಗಡೆ ಬರಲು
ಮರವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕು
ತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು
ಅರಿತು ಆರಿಯದ ಹಾಗೆ ಇರುವ ನಮ್ಮಜ್ಜ
ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲ
ಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜ
ಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿ
ಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ
ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತ
ಕಲಿಯುಗಂಗಳನೆಲ್ಲ ಪೊರೆವಾತನೀತ
ಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನ
ವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ
Music
Courtesy:
ಸ್ಥಲ -
ವಿಷಯ -
ಆತ್ಮಚರಿತ್ರೆ