ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು
ಪದುಮನಾಭನ ಪಾದದೊಲುಮೆ ಎನಗಾಯಿತು
ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತು
ಹರಿಯ ನಾಮಾಮೃತ ಕಿವಿಗೊದಗಿತು
ಹರಿಯ ದಾಸರು ಎನ್ನ ಬಂಧು ಬಳಗವಾದರು
ಹರಿಯ ಶ್ರೀಮುದ್ರೆ ಆಭರಣವಾಯ್ತು
ಮುಕುತರಾದರು ಎನ್ನ ನೂರೊಂದು ಕುಲದವರು
ಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊ
ಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದು
ರುಕುಮಿಣಿಯರಸ ಕೈವಶನಾದನೆನಗೆ
ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತು
ಮುಂದೆನ್ನ ಜನ್ಮ ಸಫಲವಾಯಿತು
ತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯ
ಬಂದೆನ್ನ ಹೃದಯದಲ್ಲಿ ನೆಲೆಯಾಗಿ ನಿಂತ
Music
Courtesy:
ಸ್ಥಲ -
ವಿಷಯ -
ಆತ್ಮಚರಿತ್ರೆ