ಕೀರ್ತನೆ - 68     
 
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಹಾವು ಹಿಡಿಯಲು ಬಹುದು ಹರಣ ನೀಡಲು ಬಹುದು ಬೇವ ಕಿಚ್ಚನು ಹಿಡಿದು ನುಂಗಬಹುದು ಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತ ಸಾವುದೇ ಲೇಸು ಅಭಿಮಾನಿಗಳಿಗೆ ಪರರ ಸೇರಲು ಬಹುದು ಪತಿತರಲ್ಲಿರಬಹುದು ಕೊರಳ ಫಾತಕಂಗೆ ಶಿರ ಒಪ್ಪಿಸಬಹುದು ತರುಣಿಯಳ ತೌರು ಮನೆಯಲ್ಲಿ ಇರುವುದಕ್ಕಿಂತ ತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದು ಹೇವವನಿಕ್ಕಿ ಚೂರ್ಣವ ಮಾಡಲು ಆವಾಗ ನೋಡಿದರು ಎನಗೆ ಹಿತರಿಲ್ಲೆಂದು ಮಾವ ಹೊರಗಾಡುವನು ಚಿಕ್ಕ ನುಡಿಗಳನು ಬಂದೊಂದು ತಿಂಗಳೊಳು ಬಹುಮಾನ ನಡತೆಗಳು ಬಂದೆರಡು ತಿಂಗಳೊಳಗೆ ಹಿತವಾದವು ಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವು ಸಂದೇಹವೇಕೆ ಸಂಸಾರಿಗಳಿಗೆ ಈ ಪರಿಯಲುಂಬಂಥ ಅಳಿಯ ಭೋಜನಕಿಂತ ಗೋಪಾಳ ಲೇಸು ಅಭಿಮಾನಿಗಳಿಗೆ ಶ್ರೀಪತಿ ನೆಲೆಯಾದಿಕೇಶವನ ಚರಣ ಸ- ಮೀಪದಲಿ ವಾಸಿಪುದೆ ವಾಸಿ ಮನವೆ