ಕೀರ್ತನೆ - 70     
 
ಸಾಲದೆ ನಿನ್ನದೊಂದು ದಿವ್ಯನಾಮ -ಅ- ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿ ರಣವನುತ್ತರಿಸಿ ಮರಣವ ತಾಳಿರೆ ಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನ ಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವ ಸಂತತ ನೆತ್ತರನೊರಸಿ ಬಿಸುಟೆ ತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲು ಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ ಕ್ಷೀಣ ದೇಹವ ಬಿಡುವೆನೆಂದು ಪಾಡಂಬಟ್ಟು ತ್ರಾಣದಲಿ ಗರಳ ತೈಲವ ಸೇವಿಸೆ ವೇಣುನಾದದಲಿ ಹಣೆಯನೇವರಿಸಿ ಪಂಚ ಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳು ಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟು ಹೆಮ್ಮಕ್ಕಳ ಬಾಧಿಸುವುದನು ಕಂಡು ಬೊಮ್ಮಜಟ್ಟಿಗರ ಶಿರವರಿದೆ ನರಹರಿಯ ಓದಿ ಹೇಳಿದರೊಂದು ಕಥೆಯಾಗುತ್ತಿದೆ ಮಹಾಂ ಬೋಧಿಶಯನನೆ ವೇದಶಾಸ್ತ್ರ ಮುಖದಿ ಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆ ಯಾದಿಕೇಶವನ ನಾಮ ಸಂಕೀರ್ತನ