ಕೀರ್ತನೆ - 74     
 
ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆ ಅರಿಯದಿದ್ದರೆ ನರಕವೇ ಪ್ರಾಪ್ತಿ ದುರ್ಜನರ ಮನೆಯ ಪಾಯಸಾನ್ನಕಿಂತ ಸಜ್ಜನರ ಮನೆಯ ರಬ್ಬಳಿಗೆ ಲೇಸು ಹೆಜ್ಜೆಗೆ ಸಾವಿರ ಹೊನ್ನನಿತ್ತರೂ ಬೇಡ - ಬಲು ದುರ್ಜನರ ಸ೦ಗ ಬಲು ಭ೦ಗ ಹರಿಯೆ ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತ ಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸು ಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನು ಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ ಆಶೆಕಾರರ ಮನೆಯ ವಿಲಾಸ ಸುಖಕಿಂತ ಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸು ಭೂಸುರಪ್ರಿಯ ಕಾಗಿನೆಲೆಯಾದಿಕೇಶವನ ಮೀಸಲಿನ ಪಾದಭಜನೆ ಕಡುಲೇಸು ಮನವೆ