ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ
ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನು ಅರಿಯಲಾರಳೊ ದೇವ
ಇಂದಿರಾದೇವಿಯು ಅರಿಯಲಾರಳು ದೇವ
ಬೃಂದಾರಕರೆಲ್ಲ ನಿಂದು ಯೋಚಿಪರು
ನಂದತೀರ್ಥರ ಮತದೊಳಗೆ ಬಂದವರೆಲ್ಲ
ಎಂದಿಗಾದರು ಪರಮಾನಂದ ಪೊಂದುವರು
ಮಾನವರು ಹೀನಮಾರ್ಗದೊಳು ಮುಳುಗಿಹರು
ಜ್ಞಾನಿಗಳು ನಿಂದು ಧ್ಯಾನಿಪರು ನಿನ್ನ
ನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣ
ಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ
ಜಲದೊಳಗಿನ ಕಪ್ಪೆ ಜಲದ ಸವಿಯರಿಯದು
ಜಲದ ಸುಗಂಧವ ಜಲವರಿಯದು
ನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆ
ಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೋ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ