ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ
ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ
ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನು
ಪಾಯದಿಂದ ಹೇಮದಂತೆ ಬಣ್ಣಗಟ್ಟಿ
ಬಾಯ ಬಡಿದು ತಂದು ತಂದು
ಕಾಯ ಕಳದೆನಲ್ಲದೆ
ಚ೦ಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದ
ವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತ
ಸ೦ಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆ
ಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆ
ಉಕ್ಕಿ ಸವಿದು ಮನುಜರೊಡನೆ
ಸೊಕ್ಕಿ ದಿನವ ಕಳೆದೆನೆನಗೆ
ತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ