ಕೀರ್ತನೆ - 90     
 
ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ವಾಸುದೇವನ ಭಜಿಸೊ ಒರಟು ಜೀವನವೆ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆ ಎ೦ಟು ದಿನದಾಯಾಸ ಅಟ್ಟಬಹುದೊ ಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ- ಕುಂಠವಾಸಿಯ ಭಜಿಸೊ ತುಂಟ ಜೀವನವೆ ಮಡದಿ ಮಕ್ಕಳು ಎಂಬ ಮಾಯಾ ಸಂಸಾರಕ್ಕೆ ಸಡಗರವಗೊಂಡು ಬರಿದೆ ಭ್ರಮಿಸಲೇಕೆ ಬಿಡದೆ ಯಮನಾಳುಗಳು ಬಾರೆಂದು ಎಳೆವಾಗ ಮಡದಿ ಮಕ್ಕಳು ಬಹರೆ ಭಂಡ ಜೀವನವೆ ಇಷ್ಟ ಸಂಪತ್ತನ್ನು ಬಡವರಾ ಕರೆತಂದು ಕೊಟ್ಟು ಮಾಡಿದ ಪುಣ್ಯಫಲ ತನ್ನದೊ ಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಫ್ರಿ ಮುಟ್ಟ ಮನದಲಿ ಭಜಿಸೊ ಭ್ರಷ್ಟಜೀವನವೆ