ಕೀರ್ತನೆ - 91     
 
ಎಲ್ಲಿಂದ ಬಂದೆ ಮುಂದೆತ್ತ ಪಯಣ ಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ಮಾತೆಯುದರದೊಳು ನವಮಾಸ ಮಲಮೂತ್ರದೊಳು ಯಾತನೆಯ ಯೋನಿ ಮುಖ ಮಾರ್ಗವಿಡಿದು ಭೂತಳಕೆ ಬಂದ ಹದನೇನ ತೀರಿಸಿಕೊಂಡೆ ಜಾತಿ ಯಾವುದು ನಿನ್ನ ಹೆಸರೇನು ಮರುಳೆ ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನು ಹಿ೦ದೆ ನೆರವಾಗಿ ನಿಂತಾಪ್ತರುಂಟೆ ಒ೦ದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರು ನಿಂದು ಮಾತಾಡು ಬರಿದೆ ಬಳಲಿದೆ ಮರುಳೆ ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡು ಇರುವ ಮಂದಿರವಾವುದದನೆನಗೆ ಪೇಳೊ ಧರೆಯೊಳಗೆ ವರಕಾಗಿನೆಲೆಯಾದಿಕೇಶವನ ಸಿರಿ ಚರಣಕಮಲವನು ನೆರೆನಂಬಿ ಸುಖಿಸೊ