ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ
ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು
ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣ
ವಿಷ ಸಮಾನವಾದ ಬಹಳ ವ್ಯಸನ ಮೆರವಣಿ
ಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊ೦ಬ ರೋಗ ವಿಷಯದೊಳಗೆ ಕ್ಷೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ
ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆ
ಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದ
ಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶ ಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು
ಅಸ್ಥಿ ಚರ್ಮ ರಕ್ತ ಮಾ೦ಸ ವಿಸ್ತರವಾದ ಹೇಯ ಮಧ್ಯಮೆ
ವಸ್ತು ಏರುತಿಳಿಯುತುದಯ ಅಸ್ತಮಾನದಿ
ರಕ್ತ ಕುಸುಮ ಗಂಧಮಾಲೆ ಕಸ್ಕೂರಿಯನು ಪೂಸಿಕೊಂಡು
ವಸ್ತ್ರ ಒಡವೆ ಇಟ್ಟು ಬಹಳ ಶಿಸ್ತು ನರಕಿಯೆನಿಸಿ ಮೆರೆವುದು
ಬೇಯದಿರುವ ಹಸಿಯ ಬಿಂದಿಗೆ ತೋಯ ಹಿಂಗುವಂತೆ ಸಾಕ್ಷಿ ಆಯುಷ್ಯವನರಿಯದಿರುವ ಕಾಯ ಸೌಖ್ಯದಿ
ಆಯಾಸಪಟ್ಟು ಗಳಿಸಿದರ್ಥ ಹೇಯವೆನದೆ ಭೋಗಿಸುತ್ತ
ಬಾಯ ಸವಿಯನುಂಡು ಕಡೆಗೆ ನಾಯ ಸಾವು ಸಾಯೋ ಬಾಳಿಗೆ
ಮನ್ನಿಸಿ ಗುರುಹಿರಿಯರುಕ್ತಿಯನ್ನು ಕೇಳದೆ ಕಿವುಡುಗೆಟ್ಟು
ಜೊನ್ನೆಯ ತುಪ್ಪ ಅನ್ನ ಒಲ್ಲದೆ ಎಲುವು ಮಾಂಸವನ್ನು ತಿಂಬ ಕುನ್ನಿಯಾದೆನಯ್ಯ ಕೃಷ್ಣ ನಿನ್ನ ಮಾಯದೊಳು ಸಿಲ್ಕಿದ
ಎನ್ನನುದ್ಧರಿಸೊ ಸುಪ್ರಸನ್ನ ಆದಿಕೇಶವ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ