ಕೀರ್ತನೆ - 94     
 
ಎ೦ತಹುದೊ ನಿನ್ನಯ ಭಕುತಿ ಎನಗೆ - ಶ್ರೀ ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಹಿ೦ದೆ ಮಾಡಿದ ಸುಕೃತ ಫಲವು ಮೊದಲಿನಿತಿಲ್ಲ ಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲ ಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ ದ೦ಧಕಾರವ ಬಿಡಿಸಿ ಹೊಂದಿಸು ಜ್ಞಾನವನು ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳ ಒದಿದವನಲ್ಲ ನಿನ್ನಯ ಭಕುತಿಗಧಿಕ ವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ ಪಾದಿಸುವ ಭಕುತಿ ಇನ್ನೆಂತಿಹುದೊ ದೇವ ಹುಟ್ಟಿದ ಮೊದಲುಗೊಂಡು ಇಂದು ಪರಿಯಂತರವು ಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನು ಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆ೦ತಹುದೀ ಕಷ್ಟ ಶರೀರದೊಳು ತೊಳಲಲಾರೆನು ಹರಿಯೆ ನರಜನ್ನವೆಂಬ ಪಾತಕದ ಪಂಜರದೊಳಗೆ ಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿ ಎರವಿನ ಮಾತಾಪಿತರನುಜರೆಂಬ ಉರಿಕಾವು ಕ್ಷಯವೆಂಬ ಸರಿಗಳನು ವಂದಿಸುವೆ ಇನಿತುಪರಿಯಲಿ ನಾನು ಹಲುಬಿದೊಡೆ ನೀನು ಸುಮ್ಮನಿದ್ದೊಡೆ ಬಹು ಅಪಕೀರ್ತಿಯು ನಿನ್ನ ದಾಸಗೊಲಿದು ಸಲಿಸಯ್ಯ ಮನದಿಷ್ಟ ಕನಕಾದ್ರಿಯೊಳು ನೆಲಸಿದಾದಿಕೇಶವರಾಯ