ಕೀರ್ತನೆ - 99     
 
ಏನು ಮಾಡಲಯ್ಯ ಬಯಲಾಸೆ ಬಿಡದು ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಜ್ಕೋತಿರ್ಮಯವಾದ ದೀಪದ ಬೆಳಕಿಗೆ ತಾನು ಕಾತರಿಸಿ ಬೀಳುವ ಪತಂಗದಂದದಲಿ ಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವ ಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ ಅಂದವಹ ಸಂಪಗೆಯ ಅರಳ ಪರಿಮಳವುಂಡು ಮುಂದುವರಿಯದೆ ಬೀಳ್ವ ಮಧುಪನಂತೆ ಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂ ಗಂಧ ವಾಸಿಸುವ ಫ್ರಾಣೇಂದ್ರಿಯಕೆ ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡು ಪ್ರಾಣಾಹುತಿಯೆಂದು ಸವಿವ ಮೀನಿನಂತೆ ಏಣಾಕ್ಷಿಯರ ಚೆ೦ದುಟಿಯ ಸವಿಯ ಸವಿಸವಿದು ಜಾಣತನದಲಿ ನಲಿವ ಜಿಹ್ವೇಂದ್ರಿಯಕೆದ ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆ ಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆ ರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿ ಕಕ್ಕುಲಿತೆಗೊಂಬುದಿದ ನೀನು ಬಿಡಿಸೂ ಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯ ದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ