ಕಡೆ ಹಾಯಿಸೊ ಕಮಲ ಲೋಜನನೆ ಎನ್ನ
ತಡಿಯ ಸೇರಿಸೊ ತರಣಿಶತಕೋಟಿ ತೇಜ
ಕಾಕು ಇಂದ್ರಿಯಗಳೆಂಬ ಕಟುಕರಿಗೆ ನಾ ಸಿಲುಕಿ
ಮೇಕೆಯಂದದಿ ಬಾಯಿ ಬಿಡುತಿಪೆನು
ಸಾಕಾರ ರೂಪ ಸರ್ವೋತ್ತಮನೆ ನೀ ಕರು
ಣಾಕರನೆಂಬ ಪೆಂಪುಂಟಾದಡೀಗೆನ್ನ
ಹಲವು ಜನ್ಮದ ಪಾಪವೆನಿಪ ಸೊಕ್ಕಾನೆ ಸೊಂ
ಡಲು ಸುತ್ತಿ ಬಂದು ಸೀವರಿಸುತಿದೆಕೊ
ಮಲೆವ ದುಷ್ಕೃತವೆಂಬ ಗಜಕೆ ಕೇಸರಿ ಎಂಬ
ಛಲ ಬಿರುದು ತಾಳ್ದ ದೇವರ ದೇವ ನೀನೆನ್ನ
ಹಾದಿಗಾಣದೆ ತೊಲಗಿ ಪೋಪೆನೆಂದರೆ ಭಾವ
ಬೂದಿಯೊಳಗಾಡಿ ಮುಳುಗಾಡುತಿಹೆನೊ
ಭೂಧರನ ತಾಳ್ದ ಕೂರ್ಮಾವತಾರನೆ ಬಾಡ
ದಾದಿಕೇಶವರಾಯ ಬೆನ್ನಲೆತ್ತಿಕೊಂಡು
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ