ಕೀರ್ತನೆ - 111     
 
ಜಪವ ಮಾಡಿದರೇನು ತಪವ ಮಾಡಿದರೇನು ವಿಪರೀತ ಕಪಟಗುಣ ಕಲುಷವಿದ್ದವರು ಆದಿಗುರುವರಿಯದೆ ಅತ್ತಲಿತ್ತಲು ತೊಳಲಿ ವೇದಶಾಸ್ತವನೋದಿ ಬಾಯಾರಲು ಹಾದಿಯನು ಕಾಣದಂತಿರುತಿರ್ದು ಹಲವೆಂಟು ವಾದ ತರ್ಕದೊಳಿದ್ದ ಭೇದವಾದಿಗಳು ನುಡಿ ನಡೆವ ಕಾಲದಲಿ ದಾನ ಮಾಡದೆ ಇರಲು ಅಡವಿಯೊಳು ಕೆರೆ ತುಂಬಿ ಬತ್ತಿದಂತೆ ಮಡದಿ ಮಕ್ಕಳಿಗೆಂದು ಒಡವೆ ವಸ್ತ್ರವ ಗಳಿಸೆ ಹಿಡಿಯಲಾ ಯಮನವರ ಕಟ್ಟಿಗೊಳಗಾಗಿ ಚಳಿಮಳೆಯ ಅತಿ ಕಾರುಗತ್ತಲೆಯೊಳಗೆ ಎದ್ದು ಹೊಳೆಯೊಳಗೆ ಮುಳುಗಿ ಜಪ ತಪವ ಮಾಡಿ ಕಳವಳಿಸಿ ನೂರೆಂಟು ಹಲುಬಿ ಬಳಲಲು ಬೇಡ ನಳಿನಾಕ್ಷ ಆದಿಕೇಶವನ ನೆನೆ ಮನವೆ