ತನು ನಿನ್ನದು ಜೀವನ ನಿನ್ನದು ರಂಗ
ಅನುದಿನದಲಿ ಬಾಹೊ ಸುಖದುಃಖ ನಿನ್ನದಯ್ಯ
ಸವಿನುಡಿ ವೇದ ಪುರಾಣ ಶಾಸ್ತ್ರಂಗಳ
ಕಿವಿಗೊಟ್ಟು ಕೇಳುವ ಕಥೆ ನಿನ್ನದು
ನವಮೋಹನಾಂಗಿಯರ ರೂಪವನು ಕಣ್ಣಿಂದ
ಎವೆಯಿಕ್ಕದೆ ನೋಡುವ ನೋಟ ನಿನ್ನದಯ್ಯ
ಒಡಗೂಡಿ ಗಂಧಕಸ್ತೂರಿ ಪರಿಮಳಂಗಳ
ಬಿಡದೆ ಲೇಪಿಸಿಕೊಂಬುವುದು ನಿನ್ನದು
ಪಡುರಸದನ್ನಕ್ಕೆ ನಲಿದಾಡುವ ಜಿಹ್ವೆ
ಕಡು ರುಚಿಗೊಂಡರಾ ರುಚಿ ನಿನ್ನದಯ್ಯ
ಮಾಯಾ ಪಾಶದ ಬಲೆಯೊಳಗೆ ಸಿಲುಕಿರುವ
ಕಾಯ ಪಂಚೇಂದ್ರಿಯಂಗಳು ನಿನ್ನವು
ಕಾಯಜಪಿತ ಕಾಗಿನೆಲೆಯಾದಿಕೇಶವ
ರಾಯ ನೀನಲ್ಲದೆ ನರರು ಸ್ವತಂತ್ರರೆ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ