ಕೀರ್ತನೆ - 114     
 
ತಲ್ಲಣಿಸದಿರು ಕಂಡ್ಯ ತಾಳು ಮನವೆ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ ಕಟ್ಟೆಯನು ಕಟ್ಟಿ ನೀರೆರೆದವರು ಯಾರೊ ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು ಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ ಆಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ ಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ ಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ ನವಿಲಿಗೆ ಚಿತ್ರ ಬರೆದವರು ಯಾರು ಪವಳದ ಲತೆಗೆ ಕೆಂಪಿಟ್ಟವರು ಯಾರು ಸವಿಮಾತಿನರಗಿಳಿಗೆ ಹಸುರು ಬರೆದವರು ಯಾರು ಅವನೆ ಸಲಹುವನು ಇದಕೆ ಸಂಶಯವಿಲ್ಲ ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ ಅಲ್ಲಲ್ಲಿಗಾಹಾರ ತಂದೀವರಾರು ಬಲ್ಲಿದನು ಕಾಗಿನೆಲೆಯಾದಿಕೇಶವರಾಯ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ