ಕೀರ್ತನೆ - 123     
 
ನನ್ನಿಂದ ನಾನೇ ಜನಿಸಿ ಬಂದೆನೆ ದೇವ ಎನ್ನ ಸ್ವತ೦ತ್ರವು ಲೇಶವಿದ್ದರು ತೋರು ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆ ನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮ ಜನನಿಯ ಜಠರದಲಿ ನವಮಾಸ ಪರಿಯಂತ ಘನದಿ ನೀ ಪೋಷಿಸುತಿರೆ, ನಾನು ಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದ ವನಜಾಕ್ಷ ನೂಕಿದವನು ನೀನಲ್ಲವೆ ಎಲವುಗಳ ಜಂತೆ ಮಾಡಿ ನರಗಳ ಹುರಿಯಿ೦ ಹೊಲಿದು ಚರ್ಮವ ಹೊದಿಸಿ ದೇಹದೊಳು ಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿ ನೆಲಸಿ ಚೇತನವನಿತ್ತವ ನೀನಲ್ಲವೆ ಜನಿಸಿದಾರಭ್ಯದಿ೦ದ ಇಂದಿನ ಪರಿಯಂತ ಫನಘನ ಪಾಪ ಸುಕರ್ಮ೦ಗಳನು ಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲ ಅನುಭವಿಸುವುದು ಜೀವನೊ ನೀನೊ ದೇವ ಅ೦ಧಕನ ಕೈಲಿ ಕೋಲಿತ್ತು ಕರೆದೊಯ್ಯುವಾ ಮುಂದಾಳು ತಪ್ಪಿ ಗುಂಡಿಗೆ ಕೆಡಹಲು ಅಂಧಕನ ತಪ್ಪೂ ಅದು ಮುಂದಾಳಿನ ತಪ್ಪೊ ಹಿಂದಾಡಬೇಡ ಎನ್ನೊಳು ತಪ್ಪಿಲ್ಲವೊ ಕಂದನ ತಾಯಿ ಆಡಿಸುವಾಗ ಅದು ಪೋಗಿ ಅಂದಿ ಬಾವಿಯ ನೋಡುವುದನು ಕಂಡು ಬ೦ದು ಬೇಗನೆ ಬಾಚಿ ಎತ್ತಿಕೊಳ್ಳದಿದ್ದರದು ಕ೦ದನ ತಪ್ಪೊ ಮಾತೆಯ ತಪ್ಪೊ ಪರಮಾತ್ಮ ಭಾರ ನಿನ್ನದೊ ದೂರು ನಿನ್ನದೊ ಕೃಷ್ಣ ನಾರಿ ಮಕ್ಕಳು ತನುಮನ ನಿನ್ನದಯ್ಯ ಕ್ಷೀರದೊಳಗದ್ದು ನೀರೊಳಗದ್ದು ಗೋವಿಂದ ಹೇರನೊಪ್ಪಿಸಿದ ಮೇಲೆ ಸುಂಕವೆ ದೇವ ನ್ಯಾಯವಾದರೆ ದುಡುಕು ನಿನ್ನದೊ, ರಂಗ, ಮತ್ತ- ನ್ಯಾಯವಾದರೆ ಪೇಳುವರಾರು ಮಾಯಾರಹಿತ ಕಾಗಿನೆಲೆಯಾದಿಕೇಶವ ಕಾಯಯ್ಯ ತಪ್ಪನೆಣಿಸದೆ ದೇವ