ನಾರಾಯಣ ಎಂಬ ನಾಮದ ಬೀಜವನು ನಾಲಗೆಯ
ಕೂರಿಗೆಯ ಮಾಡಿ ಬಿತ್ತಿರಯ್ಯ
ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿ
ತನ್ವಿರಾ ಎಂಬ ಎರಡೆತ್ತ ಹೂಡಿ
ಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿ
ಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ
ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯ
ಮದಮತ್ಸರವೆಂಬ ಪೊದೆಯ ಇರಿಯಿರಯ್ಯ
ಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯ
ಚಂಚಲವೆಂಬ ಹಕ್ಕಿಯ ಓಡಿಸಿರಯ್ಯ
ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯು
ಶ್ಯದ ರಾಶಿಯನು ಅಳೆಯಿರಯ್ಯ
ಇದು ಕಾರಣ ಕಾಗಿನೆಲೆಯಾದಿಕೇಶವನ
ಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ