ನಿನ್ನ ನಾ ಮರೆತರೂ ಎನ್ನ ಕೈ ಬಿಡದಿರು ಕರುಣಿ
ಚನ್ನಕೇಶವ ಶ್ರೀ ವೆಂಕಟಾದ್ರಿನಿಲಯ
ಎನ್ನ ತಪ್ಪುಗಳ ನಾನು ಮರೆಯಲೆಂತು ಎನ್ನ
ಬೆನ್ನ ನೋಡಿಕೊಳ್ಳಲಹುದೆ ಎನ್ನಿ೦ದ
ಮಂಜು ಮರೆಯಾಗುವುದು ಮಾರ್ತಾಂಡ ಮೂಡೆ
ಕಂಜಲೋಚನ ನಿನ್ನ ಪದಕಮಲ ಸ್ಮರಣೆ
ರಂಜಿಸಿ ಮನವನು ಪಾರಾಗಿಪುದು ಪಾಪಗಳ
ಅಂಜಿಕೆಯ ಬಿಡಿಸುತ ಅನುಗ್ರಹಿಪ ಕರುಣಿ
ದಯೆ ನಿನ್ನದಿರೆ ಭಯ ಎನಗಿಲ್ಲ ಹರಿ
ಮಾಯೆ ಮೋಹಗಳಿಗೆ ಮರುಳಾಗಿಹ ಬೊಂಬೆ
ಜಯವಾಗಿಸಿ ಈ ಜನ್ಮ ಕೃತಾರ್ಥವ ಮಾಡು
ತೋಯಜಾಕ್ಷ ಶ್ರೀ ನೆಲೆಯಾದಿಕೇಶವರಾ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ