ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ
ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ
ವರದನು ಕರದಲಿ ಉಷ್ಣಜಲ ಮೃತ್ತಿಕೆಯ
ತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆ
ಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತ೦-
ದಿರಿಸಿದಪರಾಧ ಎನ್ನದೊ ನಿನ್ನದೊ ದೇವ
ಬ೦ದ ಭ್ರುಗು ಮುನಿ ಎದೆಯನೊದೆಯೆ ಆತಗೆ ಪಾಪ
ಅಂದು ಮೂದಲಿಸಿ ಬೈದವರಿಗೆ ದೋಷ
ನಿಂದುದೇ ಹಣೆಯೊಳಗೆಸೆಯೆ ಭೀಷ್ಮ೦ಗಘವು
ಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ
ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದು
ದರಿಗೆ ನೂಕಿದಡೆ ಅವನು ಏನು ಮಾಡುವನು
ಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆ
ಅರಸನಾಳ ಕೊಂದಡೆ ಆರೇನು ಮಾಡುವರು
ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿ
ಇನಿತುಂಟೆ ಕಪಟನಾಟಕ ಸೂತ್ರಧಾರಿ
ಇನಿತಾಡಿಸಿದರಾಡುವೆ ಪಾಪ ಪುಣ್ಮ೦ಗಳಿ೦ದ
ಎಣಿಕೆಗಾನಲ್ಲ ನೀನಲ್ಲದಿಲ್ಲ
ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖ
ದಿಂದ ಕಚ್ಚಿಸಲು ಆ ತಪ್ಪು ಕ೦ದನದೆ
ಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು
ತಂದೆ ವೇಲಾಪುರದ ಆದಿಕೇಶವನೆ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ