ಬ೦ದೆವಯ್ಯ ಗೋವಿಂದಶೆಟ್ಟಿ - ನಿಮ್ಮ
ಹರಿವಾಣ ತೀರ್ಥಪ್ರಸಾದ ಉಂಟೆನಲಾಗಿ
ಅಪ್ಪವು ಅತಿರಸ ತುಪ್ಪವು ಚಿನಿಪಾಲು
ಒಪ್ಪುವ ಸಕ್ಕರೆ ಯಾಲಕ್ಕಿಯು
ಅಪರೂಪವಾದ ಕಜ್ಜಾಯಗಳನೆಲ್ಲ
ಛಪ್ಪನ್ನ ದೇಶಕ್ಕೆ ಮಾರುವ ಶೆಟ್ಟಿ
ಒಡೆದ ಮಡಕೆ ತಂದು ಇಡಿದು ನಾಮವ ಮಾಡಿ
ಕೊಡುವೆ ನೀ ಕಾಸಿಗೆ ಒಂದೊಂದನು
ಒಡಲು ತುಂಬಿ ಮಿಕ್ಕ ಅನ್ನವ ಮಾರಿಸಿ
ಒಡವೆಯ ಗಳಿಸುವ ಕಡುಲೋಭಿ ಶೆಟ್ಟಿ
ಶೇಷಗಿರಿಯಲ್ಲಿ ವಾಸ ಮಾಡಿಕೊಂಡು
ದೇಶದೇಶಕ್ಕೆ ಹೆಸರಾದ ಶೆಟ್ಟಿ
ಕಾಸುಕಾಸಿಗೆ ಬಡ್ಡಿ ಗಳಿಸಿಕೊ೦ಬ ಆದಿ
ಕೇಶವ ನಾರಾಯಣ ತಿಮ್ಮಶಟ್ಟಿ