ಕೀರ್ತನೆ - 143     
 
ಬಂಧುಗಳದಾರಿಗಾರಿದ್ದರೇನು - ಇಷ್ಟ ಬಂಧು ತ್ರೈಜಗಕೆ ಶ್ರೀಹರಿಯಲ್ಲದೆ - ಮಿಕ್ಕ ಬ೦ಧುಗಳದಾರಿಗಾರಿದ್ದರೇನು ನೆಗಳ ಕೈಯಲ್ಲಿ ಮಾತಂಗವು ಸಿಕ್ಕಿ ಒದರಲಾಗಿ - ಆ ನೆಗಳೇನ ಮಾಡುತಿರ್ದವಡವಿಯಲಿ ನಗಜೆಯಾಳ್ದನ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾ ದಿಗಳೇನ ಮಾಡುತಿರ್ದರಾ ಶೈಲದೊಳಗೆ ದಿಂಡೆಯ ಮಾರ್ಗದಿ ಮಲತಾಯಿ ಮಗನ ಹೊಡೆಯಲು ಮಂಡಲ ಪತಿ ಏನ ಮಾಡುತಿರ್ದನು ಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲು ಗಂಡರೈವರು ನೋಡಿ ಏನ ಮಾಡುತಿರ್ದರಯ್ಯ ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆ ಮಿಗೆ ಸತಿಸುತರೇನ ಮಾಡುತಿರ್ದರು ಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆ ಮಿಗು ಬ೦ಧುಗಳದಾರಿಗಾರಿದ್ದರೇನು