ಯಾಕೆಲೊ ರಂಗ ನಿನಗಿಂತು ನಟನೆಯ ಮಾತು
ಮಾಕಾಂತ ಕರೆಸಿದರೆ ಬಾರದಿಹ ಪೊಗರು
ಗೊಲ್ಲತನವಂ ಬಿಡಿಸಿ ಗೋಗಾವ ಡಿಂಬ್ಹರಿಸಿ
ಉಳ್ಳ ತಸ್ಕರ ಬುದ್ಧಿ ಕಡೆಗೆ ಇರಿಸಿ
ಬಾಲಕನ ವಂದರಿಸಿ ಬಹುಭಾಗ್ಯವಂತನೆನಿಸಿ
ಎಲ್ಲರೊಳು ಸಲಿಗೆ ನಿಲಿಸಿದಳೊ ನಿಮ್ಮರಸಿ
ಕೆಸರ ಚೊಗೆಯಂ ಬಿಡಿಸಿ ಗುಂಜ ಸರವಂ ತೆಗೆಸಿ
ಬಿಸರುಹ ಮಣಿಮಾಲೆ ಕಡೆಗೆ ಇಡಿಸಿ
ಪೊಸ ಪೀತಾಂಬರ ಉಡಿಸಿ ನವರತ್ನವಂ ತೊಡಿಸಿ
ವಸುಧೆಯೊಳು ಮಿಗಿಲಾಗಿ ನಿಲಿಸಿದಳೊ ನಮಿಸಿ
ಎನ್ನ ಮಾತನು ಕೇಳು ಮುನಿಸು ಕೃತ್ಯವ ಸೀಳು
ಇನ್ಯಾಕೆ ಯೋಚನೆ ಫಲವ ಪೇಳು
ಬಿನ್ನಹವನು ಕೇಳು ನೆರೆಗೂಡಿ ಸುಖಬಾಳು
ಚೆನ್ನ ಬಾಡದಾದಿಕೇಶವ ದಯಾಳು
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ