ಕೀರ್ತನೆ - 151     
 
ಯಾರಿಗಾರು ಬಹರು ಸಂಗಡ - ಮುಂದೆ ಮೀರಿ ನಡೆದ ಸಂಚಿತ ಕರ್ಮವಂತೆ ಕಂತೆ ಮುಂಗಡ ಬರೆದ ಬರೆಹ ತೊಡೆದ ಮೇಲೆ ಕರೆದರಾಗ ಹೋಗಬೇಕು ನೆರೆದು ಸುತ್ತಮುತ್ತ ಕುಳಿತ ಪರಮ ಬಂಧುವರ್ಗವೆಲ್ಲ ಇರಿಸಬೇಡಿ ಸುಡುಸುಡೆಂಬರು ಸುಟ್ಟಬಳಿಕ ಭರದಿ ಬ೦ದು ಮನೆಯೊಳೆಂಬರು ಪಾಷಿ ಸತ್ತ ತರುಣಿ ಕೆಟ್ಟಳೆಂದುಕೊಂಬರು ಆತ್ಮ ಸತಿಯು ಸುತರು ಪುತ್ರಿ ಮಿತ್ರರತಿಶಯದೊಳು ತಂದೆ ತಾಯಿ ಅತಿ ವಿನೋದಗೈಯುವ ಭಾವ ಜತನವೆಂಬೊ ಅತ್ತೆ ಮಾವ ಜೊತೆಗೆ ಹುಟ್ಟಿದಣ್ಣ ತಮ್ಮ ಈ ದೇಹ ತಾನು ಸತ್ತ ಗಳಿಗೆ ಮುಟ್ಟಲಮ್ಮರು ಬರಿದೆ ನಾವು ವ್ಯಥೆಗೆ ಸಿಕ್ಕಿದೆವೆಂಬರು ಆತ್ಮ ಕಟ್ಟಿದರ್ಧ ಕರೆವ ಎಮ್ಮೆ ಕೊಂಡುಕೊಂಡ ಸಾಲಕದನು ಪೋಟು ಮಾಡಿ ಮಕ್ಕಳೊಡನೆ ಅಷ್ಟು ಹೇಳಿ ಸಾವತನಕ ದುಷ್ಟ ಜನರು ಸುಮ್ಮನಿರುವರೆ ಕೈಯಲೊದಗಿ ದಷ್ಟು ಧರ್ಮವನ್ನು ಮರೆವರೆ ಆದಿಕೇಶವನ್ನ ಮುಟ್ಟಿ ಭಜಿಸಿ ಕಡೆಗೆ ಬಿಡುವರೆ ಆತ್ಮ