ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ
ಅರ್ಥದಾಸೆಯಲಿ ಪೃಥ್ವಿಯೊಳಗೆ ಸುತ್ತಿ
ಮತ್ತನಾಗಿ ಬಲು ಕೃತ್ಯಗಳನು ಮಾಡಿ
ಹರಿಯ ನೆನಯಲಿಲ್ಲ ಹರುಷದಿ ಗರುವ ಪುಟ್ಟಿತಲ್ಲ
ಪರಮ ಮೂಢರಲಿ ನಿರುತ ಸಂಗವ ಮಾಡಿ
ಗುರು ಹಿರಿಯರ ದಯ ದೊರೆಯದೆ ಸುಮ್ಮನೆ
ಏನು ಪೇಳಲೇನು ಎನಗೆ ಹೀನ ಬಿಡದು ಮುನ್ನ
ಶ್ವಾನಗಿ೦ತಲು ಬಲು ಮಾನಗೆಟ್ಟು ನಾ
ದೀನನಾಗಿ ಮನೆಮನೆಗಳ ತಿರುಗಿ
ಭಾಗವತರ ಪಾದಕ್ಕೊಂದಿನ ಬಾಗಿ ನಡೆಯಲಿಲ್ಲ
ರಾಗುರಂಗು ಭಕ್ತಿ ಭಾವದೊಳು
ಬೀಗಿ ಚೆನ್ನಕೇಶವನನು ನೆನೆಯದೆ
Music
Courtesy:
ಸ್ಥಲ -
ವಿಷಯ -
ಜ್ಞಾನ ಭಕ್ತಿ ವೈರಾಗ್ಯ