ಕೀರ್ತನೆ - 161     
 
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ ಉತ್ತಮ ಅಶ್ಚವ ಕತ್ತೆ ಹೋಲುವುದುಂಟೆ ವಿತ್ತವುಳ್ಳವನ ಕುಲ ಎಣಿಸುವುದುಂಟೆ ಸ್ಪಾರ್ಥಕೆ ನ್ಯಾಯ ಎಂದಾದರೂ ಉಂಟೆ ಅತ್ತೆಮನೆ ಸೇರುವಗೆ ಅಭಿಮಾನವುಂಟೆ ಬತ್ತಲೆ ತಿರುಗುವಗೆ ಭಯವು ಇನ್ನುಂಟೆ ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ ಮರ್ತ್ಯದೊಳನ್ಯ ದೇವರು ಸರಿಯುಂಟೆ