ಆರು ಬಾಳಿದರೇನು ಆರು ಬದುಕಿದರೇನು
ನಾರಾಯಣನ ಸ್ಮರಣೆ ನಮಗಿಲ್ಲದನಕ
ಉಣ್ಣ ಬರದವರಲ್ಲಿ ಊರೂಟವಾದರೇನು
ಹಣ್ಣುಬಿಡದ ಮರಗಳು ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು
ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು
ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನ
ಸ್ವಲ್ಪವೂ ನೆನೆಯದ ನರನಿದ್ದರೇನು
Music
Courtesy:
ಸ್ಥಲ -
ವಿಷಯ -
ಸಮಾಜ ಚಿಂತನೆ: ನೀತಿಬೋಧನೆ