ಕೀರ್ತನೆ - 174     
 
ಎನ್ನ ನುಡಿ ಪುಸಿಯಲ್ಲ ಈ ಜಗದೊಳು ಅರವಿ೦ದವಿಲ್ಲದಿಹ ಕೂಳವು ತಾ ಕಂಗಳವು ಹರಿಣಾಂಕನಿಲ್ಲದಿಹ ಇರುಳು ಮರುಳು ಸ್ವರಭೇದವಿಲ್ಲದಿಹ ಸಂಗೀತವಿಂಗೀತ ಸರಸವಿಲ್ಲದಿಹ ಸತಿಯ ಭೋಗ ತನುರೋಗ ಪಂಥ ಪಾಡುಗಳನರಿಯದ ಬಂಟನವ ತುಂಟ ಅಂತರವರಿಯದಾ ವೇಶಿ ಹೇಸಿ ದಂತಿಯಿಲ್ಲದ ಅರಸು ಮುರಿದ ಕಾಲಿನ ಗೊರಸು ಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನ ಮಾಗಿಯಲಿ ಸತಿಯನಗಲಿದ ಕಾಂತನವ ಬ್ರಾಂತ ಪೂಗಣೆಯ ಗೆಲಿಯದಿಹ ನರ ಗೋಖುರ ಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥ ಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ