ಕೇಳಿರೈ ಶಿವಶರಣರು ಹೇಳಲಂಜಿಕೆ ಆವುದು
ಭಾಳನೇತ್ರನ ಭಕ್ತರಿಂತು ನೋಡಿಕೊಳ್ಳಿ
ಮೂರುಲಿಂಗ ತನ್ನೊಳು ಮುಖ್ಯವಾಗಿರುವಾಗ
ಬೇರೊಂದು ಲಿಂಗ ಬೆಲೆ ಮಾಡಿ ತಂದು
ತೋರುವಂಗೈಲಿಟ್ಟು ತೋಯ ಪುಷ್ಪವ ನೀಡಿ
ಯಾರ ಮನಕೊಪ್ಪಿಸುವರೀ ಶೀಲವಂತರು
ಲಿಂಗವೊಂದು ತನ್ನೊಳು ಲೀನವಾಗಿರುವಾಗ
ಅಂಗಭವಿಗಳು ಕೂಡಿ ಆಡಿಕೊಂಬರು
ಅಂಗದನುಭವದರ್ಥವನರಿಯದ ಇಂತಹ
ಭಂಗಿ ಹುಚ್ಚರೆಲ್ಲ ಶಿವನ ಭಕ್ತರಹರೆ
ನಾಗಲಿಂಗ ತನ್ನೊಳು ನಾಟ್ಯವಾಡುತಲಿರಲು
ಆಗಮಿಸಿದ ಲಿಂಗವ ಬೆದಕಲೇತಕ್ಕೆ
ಕಾಗಿನೆಲೆಯಾದಿಕೇಶವನೆ ನಾಗಶಯನ
ನಾಗಿರಲು ಬೇರೊಂದನರಸಲೇತಕ್ಕೆ
Music
Courtesy:
ಸ್ಥಲ -
ವಿಷಯ -
ಸಮಾಜ ಚಿಂತನೆ: ನೀತಿಬೋಧನೆ