ಕುಲ ಕುಲ ಕುಲವೆನ್ನುತಿಹರು
ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ
ಕೆಸರೊಳು ತಾವರೆ ಪುಟ್ಟಲು ಅದ ತಂದು
ಬಿಸಜನಾಭನಿಗರ್ಪಿಸಲಿಲ್ಲವೆ
ಹಸುವಿನ ಮಾಂಸದೊಳುತ್ಪತ್ತಿ ಕ್ಷೀರವ
ವಸುಧೆಯೊಳಗೆ ಭೂಸುರರುಣಲಿಲ್ಲವೆ
ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯ
ತೆಗೆದು ಪೂಸುವರು ದ್ವಿಜರೆಲ್ಲರು
ಬಗೆಯಿಂದ ನಾರಾಯಣನ್ಯಾವ ಕುಲ
ಅಗಜ ವಲ್ಲಭನ್ಯಾತರ ಕುಲದವನು
ಆತ್ಮ ಯಾವ ಕುಲ ಜೀವ ಯಾವ ಕುಲ
ತತ್ತ್ವೇ೦ದ್ರಿಯಗಳ ಕುಲ ಪೇಳಿರಯ್ಯ
ಆತ್ಮಾ೦ತರಾತ್ಮ ನೆಲೆಯಾದಿಕೇಶವನು
ಆತನೊಲಿದ ಮೇಲೆ ಯಾತರ ಕುಲವಯ್ಯ
Music
Courtesy: