ಕೀರ್ತನೆ - 202     
 
ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರ ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ ಅಟ್ಟು ಉಣ್ಣದ ವಸ್ತುಗಳಿಲ್ಲ ಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನು ನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ ಜಲವೆ ಸಕಲ ಕುಲಕ್ಕೆ ತಾಯಲ್ಲವೆ ಜಲದ ಕುಲವನೇನದರೂ ಬಲ್ಲಿರ ಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹ ನೆಲೆಯನರಿತು ನೀ ನೆನೆ ಕಂಡ್ಯ ಮನುಜ ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರ ಹರಿಮಯವೆಲ್ಲವೆನುತ ತಿಳಿದು ಸಿರಿ ಕಾಗಿನೆಲೆಯಾದಿಕೇಶವರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ