ಕೀರ್ತನೆ - 212     
 
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ಮುಂದಕೆ ನಿಮ್ಮ ಮನೆಗೆ ಬಾರನಮ್ಮ ಮಗುವು ಬಲ್ಲುದೆ ಇಷ್ಟು ಬೆಣ್ಣೆ ಕದ್ದರೆ ಬಿಗಿಯ ಬಹುದೇ ಶ್ರೀ ಚರಣವನು ಆಗಣಿತ ಮಹಿಮನ ಅಂಜಿಸಲೇಕಮ್ಮ ಬಗೆಯ ಬಾರದೆ ನಿಮ್ಮ ಮಕ್ಕಳಂತೆ ಹಸುಮಗುವನು ಕಂಡು ಮುದ್ದಿಸಲೊಲ್ಲದೆ ಹುಸಿಗ ಕಳ್ಳನೆಂದು ಕಟ್ಟುವಿರಿ ವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮ ಹಸು ಮಗುವಿನಂತೆ ಭಾವಿಸಬಾರದೆ ಎಷ್ಟು ಸಾರಿಯು ನಾ ಬೇಡವೆಂದರೆ ಕೇಳ ದುಷ್ಟ ಮಕ್ಕಳ ಕೂಡೆ ಒಡನಾಟವ ಕಟ್ಟಿದ ನೆಲುವಿನ ಬೆಣ್ಣೆಯನೀವೆನು ಬಿಟ್ಟು ಕಳುಹಿರಮ್ಮ ಆದಿಕೇಶವನ