ಮಗುವ ತಡೆಯಬಾರದೆ ಮಾನಿನಿಯರು
ಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ
ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳ
ಧರಣಿಧರ ತಳಕಿಳಿದು ಬಾರದಿದೆಕೊ
ಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊ
ಬಾರಯ್ಯ ಎನೆ ಕೋಪವೇರುತಿಹ ಮಗುವ
ಬೇಡುತಿದೆ ದಾನವನು ನೀಡುತಿದೆ ಪಾದವನು
ರೂಢಿಪಾಲರ ಕಂಡು ಕೊಲ್ಲುತಿದೆಕೊ
ಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳು
ನೋಡಲ್ಕರಿನಾಗರ ಹಾವ ತುಳಿಯುತಿದೆಕೊ
ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊ
ಮತ್ತೆ ತೇಜಿಯನೇರಿ ನಲಿಯುತಿದೆಕೊ
ಹತ್ತೆ ಬಂದವರಿಗೆ ಅರ್ತಿಯನು ನೀಡುತಿಹ
ನಿತ್ಯ ವೈಕುಂಠದಲಿ ನಲಿವ ಮಗುವ
Music
Courtesy:
ಸ್ಥಲ -
ವಿಷಯ -
ದಶಾವತಾರದ ಲೀಲೆಗಳು