ಕೀರ್ತನೆ - 245     
 
ಆರಿಗಾದರು ಪೂರ್ವಕರ್ಮ ಬಿಡದು ವಾರಿಜೋದ್ಬವ ಅಜಭವಾದಿಗಳ ಕಾಡುತಿಹುದು ವೀರಭೈರವನಂತೆ ತಾನು ಬತ್ತಲೆಯಂತೆ ಮಾರಿ ಮಸಣಿಗಳಂತೆ ತಿರಿದು ತಿಂಬರಂತೆ ಸೂರ್ಯ ಚ೦ದ್ರಮರಂತೆ ರಾಹುವಟ್ಟುಳಿಯಂತೆ ಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆ ಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆ ಅಷ್ಪದಿಕ್ಪಾಲಕರು ಸೆರೆಯಾಗಿರುವರಂತೆ ಕಟ್ಟುಗ್ರದಿ೦ದ್ರನಿಗೆ ಮೈಯೆಲ್ಲ ಕಣ್ಣಂತೆ ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನು ರಣದೊಳಗೆ ತೊಡೆಮುರಿದು ಬಿದ್ದನಂತೆ ವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆ ವನಿತೆ ಧರ್ಮಜನ ತಾಯ್ತಿರಿದುಂಡಳಂತೆ ಧರೆಗೆ ಧರ್ಮಜನಂತೆ ಕಂಕಭಟ್ಟನಂತೆ ಶೂರ ಭೀಮನು ಬಾಣಸಿಗನಾದನಂತೆ ವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆ ಕಿರಿಯ ನಕುಲ ಸಹದೇವರು ತುರುಗಾಯ್ದರಂತೆ ಹರನ ವಾಹನವಂತೆ ಹುಲ್ಲು ತಿಂಬುವುದಂತೆ ವಿರಿಂಚಿ ವಾಹನವಂತೆ ಕಮಲ ಭಕ್ಷಿಪನಂತೆ ಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆ ಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ