ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ
ಭ್ರಷ್ಟ ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ
ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲ
ಪರಿಪರಿಯಲಿ ವಿದ್ಯೆಯ ಕಲಿತರಿಲ್ಲ
ನರಿಯ ಬುದ್ಧಿಯಿ೦ದಲಿ ನಡೆದುಕೊಂಡರು ಇಲ್ಲ
ಅರಿಯದೆ ಹಲವ ಹಂಬಲಿಸಿದರು ಇಲ್ಲ
ಕೂಂಡಾಡಿ ಕಾಡಿ ನೀ ಬೇಡಿಕೊಂಡರು ಇಲ್ಲ
ಕಂಡ ಕಂಡವರಿಗೆ ಕೈ ಮುಗಿದರಿಲ್ಲ
ಗ೦ಡುಗತ್ತರಿಯನು ಕೊರಳಿಗಿಟ್ಟರು ಇಲ್ಲ - ಪ್ರ-
ಚ೦ಡನಾದರು ಇಲ್ಲ, ಪರಿಹಾಸ್ಯವಲ್ಲ
ಕಟ್ಟಾಳು ಕಡುಜಾಣನಾಗಿ ಪುಟ್ಟಿದರಿಲ್ಲ
ಬೆಟ್ಟವನು ಕಿತ್ತು ತಂದಿಟ್ಟರಿಲ್ಲ
ಸೃಷ್ಟಿಯೊಳು ಕಾಗಿನೆಲೆಯಾದಿಕೇಶವರಾಯ
ಕೊಟ್ಟವರಿಗುಂಟು ಕೊಡದವ