ಕೀರ್ತನೆ - 252     
 
ಪ್ರಾಚೀನ ಕರ್ಮವಿದು ಬಿಡಲರಿಯದು ಯೋಚನೆಯ ಮಾಡಿ ಬಳಲುವುದೇಕೆ ಮನುಜ ಸೇತುವೆಯ ಕಟ್ಟಿ ಲಂಕೆಗೆ ಹಾರಿ ಹನುಮಂತ ಖ್ಯಾತಿಯಿ೦ದಲಿ ರಾವಣನ ಕೊಲ್ಲಿಸಿ ಸೀತೆಯನು ತಂದು ಶ್ರೀರಾಮನಿಗೆ ಕೊಡಲಾಗಿ ಪ್ರೀತಿಯಲಿ ಕೌಪೀನ ಬಿಡಿಸಲಿಲ್ಲ ಹರಿಯು ಲೋಕಾದಿಲೋಕಗಳ ಚರಿಸುವ ರವಿರಥಕೆ ಏಕಗಾಲಿಯು ಏಳುಕುದುರೆಗಳ ಕಟ್ಟಿ ಲೋಕಲೋಕಗಳನೆಲ್ಲ ಚರಿಸುವ ಅರುಣನಿಗೆ ಬೇಕೆಂದು ಚರಣಗಳ ಕೊಡಲಿಲ್ಲ ಹರಿಯು ಸಾಸಿರ ನಾಮದ ಒಡೆಯಾದಿಕೇಶವನ ಬೇಸರಿಸದೆ ಹೆಗಲ ಮೇಲಿರಿಸಿಕೊಂಡು ಆಕಾಶ ಮಾರ್ಗದಲಿ ಚರಿಸುವ ಗರುಡನಿಗೆ ನಾಸಿಕದ ಕೊನೆಡೊಂಕು ತಿದ್ದಲಿಲ್ಲ ಹರಿಯು