ಕೀರ್ತನೆ - 256     
 
ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನು ನೀನೆ ವಿಚಾರಿಸು ಇಬ್ಬರ ನ್ಯಾಯವ ಮಗಳಿಗೆ ಮಗಳಾದ ಮಗಳಿಗಳಿಯನಾದ ಮಗಳ ಗಂಡಗೆ ಭಾವ ಮಾವನಾದುದ ಕೇಳಿ ನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ ವೈರಿಗೆ ವೈರಿಯಾದೆ ವೈರಿಗೆ ಸುತನಾದೆ ವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿ ನಾ ನಿನ್ನ ಪಾದಕ ಬಂದೆ ಶ್ರೀಹರಿಯೆ ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದು ಏನು ಮಾಡಿದರು ಅದರ ಭಾವ ಹಿಂಗದು ಜ್ಞಾನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ